Friday, 29th March 2024
 
Advertise With Us | Contact Us

ಕೋಳಿ ಮಾಂಸದಲ್ಲಿ ಕರೋನ ಸೋಂಕು ಇಲ್ಲ: ರಾಜ್ಯ ಸರ್ಕಾರದ ಸ್ಪಷ್ಟನೆ

ಪತ್ರಿಕಾ ಪ್ರಕಟಣೆ
ಕೋಳಿ ಮಾಂಸದಲ್ಲಿ ಕರೋನ ಸೋಂಕು ಇಲ್ಲ: ರಾಜ್ಯ ಸರ್ಕಾರದ ಸ್ಪಷ್ಟನೆ
ಬೆಂಗಳೂರು, 15 ಫೆಬ್ರವರಿ 2020

ಕೋಳಿ ಮಾಂಸದಲ್ಲಿ ಕರೋನ ಸೋಂಕು ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಚೀನಾ ದೇಶದಲ್ಲಿ ಕಾಣಿಸಿಕೊಂಡಿರುವ ಕರೋನ ವೈರಸ್ (COVID2019) ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ ಹಾಗೂ ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ, ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ. ನಮ್ಮ ದೇಶದಲ್ಲಿ ಕೋಳಿಗಳಿಗೆ ಕರೋನ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ ಹಾಗೂ ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕು-ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ.

ಸಾಮಾನ್ಯವಾಗಿ ಕೋಳಿ ಮಾಂಸವನ್ನು 100 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ್ಲ ಆದ್ದರಿಂದ, ಸಾರ್ವಜನಿಕರು ಕರೋನಾ ವೈರಾಣು ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಗೊಡಬಾರದು. ಈ ರೀತಿಯ ವದಂತಿಗಳನ್ನು ಹರಡುವುದರಿಂದ ಸಾರ್ವಜನಿಕ ಉತ್ತಮ ಪೌಷ್ಟಿಕಾಂಶ ನೀಡುವ ನೀಡುವ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಯ ಮೇಲೆ ಗಣನೀಯ ದುಷ್ಪರಿಣಾಮಗಳಾಗುತ್ತವೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಬಾಣಂತಿಯರು, ಪೋಷಕಾಂಶ ಕೊರತೆಯಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಇಂತಹ ವದಂತಿಗಳು ಸಾಮಾಜಿಕ ಸ್ವಾಸ್ಥ್ಯವನ್ನು ಮತ್ತಷ್ಟು ಹದಗೆಡಿಸುತ್ತಿವೆ.

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಕೋಳಿ ಮಾಂಸ ಮತ್ತು ಮೊಟ್ಟೆ ಉತ್ತಮ ಪ್ರೋಟೀನ್ ಪೂರೈಸುವ ಆಹಾರವಾಗಿವೆ. ಯಾರೂ ಇಂತಹ ವದಂತಿಗಳನ್ನು ಹರಡಬಾರದು ಎಂದು ಪಶು ಸಂಗೋಪನಾ ಮತ್ತು ಮೀನುಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎ ಬಿ ಇಬ್ರಾಹಿಂ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 080 – 2341 8075 ಮತ್ತು 080 – 2341 6431, ಸಹಾಯವಾಣಿ: 1800 425 012 ಹಾಗೂ 080 – 2341 7100 ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

——————————

PRESS RELEASE
GOVERNMENT CLARIFIES THAT THERE IS NO CORONA VIRUS IN CHICKEN
BENGALURU, 15 FEBRUARY 2020

The State Government has clarified that there is no Corona virus in Chicken.

Recently, a Novel Corona virus (COVID2019) is reported to have affected several people in China and other parts of World. The virus spreads from contact with the infected persons only. Rumours and false messages have been posted in the social media that infection if spreads from poultry. There is no scientific evidence for such baseless messages and so far, no incidence of Corona viral infection in poultry.

Poultry has been providing a protein rich and healthy food to the public. Usually chicken is cooked at 1000 C. and no virus can survive at this temperature. Heating food upto 450 C. kills any virus. Eggs are also eaten boiled or cooked. Hence, well cooked chicken is free from any viruses and safe to eat.

It is appealed that no one in the society shall spread such rumours or fake news in any media. The consumers should not believe such messages and need not have any apprehension in using chicken or eggs in their daily diet. Rumours that corona infection spreads from poultry has badly affected consumption of chicken and eggs which provide rich nutrition. As substantial sections of children and nursing mothers are already suffering from nutritional deficiency the public health will be affected further in our society according to the Secretary to the Government in the Department of Animal Husbandry and Fisheries A B Ibrahim.

Interested persons may contact : 080 – 2341 8075, 080 – 2341 6431, Helpline :1800 425 0012, 080-2341 7100 for further information

Leave a Reply

Your email address will not be published.

Dhyeya

Contact Us

Dhyeya Media Pvt. Ltd.
#50, 1st Floor, Acharya Arcade, 4th Cross,
1st Block, 3rd Phase, Banashankari 3rd Stage,
Bengaluru – 560 085