ನೆಲಮಂಗಲ : ಚಲಿಸುತ್ತಿದ್ದ ರೈಲಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ನೆಡೆದಿದೆ.
ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ರೈಲು ನಿಲ್ದಾಣದ ಬಳಿ ನಿನ್ನೆ ಈ ಘಟನೆ ನೆಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ 14025 ಸಂಖ್ಯೆಯ ಟ್ರೇನ್ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ರೈಲ್ವೆ ಅಧಿಕಾರಿಗಳು ಬೋಗಿಗಳನ್ನು ಬೇರ್ಪಡಿಸಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ.
ಎಂಜಿನ್ ಬಿಸಿಯಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ರೈಲಿನಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಅವಘಡದ ನಂತರ ಬೇರೆ ಬೋಗಿಯ ಮೂಲಕ ಪ್ರಯಾಣಿಕರನ್ನು ರವಾನಿಸಲಾಗಿದೆ. ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.