ಬೆಂಗಳೂರು, 05 ಜುಲೈ 2017:
ಗೌರವಾನ್ವಿತ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇಂದು ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಭಾರತೀಯ ವಿಜ್ಞಾನ ಸಂಸ್ಥೆಯ ಘಟಿಕೋತ್ಸವದಲ್ಲಿ ಭಾಗವಹಿಸಿ ಭಾರತೀಯ ವಿಜ್ಞಾನ ಸಂಸ್ಥಯಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳಿಗೆ ಪದಕಗಳ ಪ್ರಧಾನ ಮಾಡಿದರು.
ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿ ವಿಜ್ಞಾನದಲ್ಲಿ ಪದವಿ ಪಡೆದು ಸುಮ್ಮನಾದರೆ ಸಾಲದು ಬದಲಿಗೆ ರಾಷ್ಟ್ರಕ್ಕಾಗಿ ಯಾವುದರಲಾದರು ಸಂಶೋಧನೆ ಮಾಡುವುದರ ಬಗ್ಗೆ ಆಲೋಚಿಸಬೇಕು ಎಂದು ಕಿವಿ ಮಾತು ಹೇಳಿದರು.
ದೇಶದಲ್ಲಿ ಪ್ರತಿಯೊಬ್ಬರು ಬುದ್ಧಿವಂತರು ಆದರೆ ಅವರಿಗೆ ಸರಿಯಾದ ಮಾರ್ಗದರ್ಶನ ಹಾಗೂ ಅವಕಾಶಗಳ ಅಗತ್ಯವಿದೆ ಎಂದು ಹೇಳಿದರು.
ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಲು ಹೆಚ್ಚು ಹಣಕಾಸಿನ ಅಗತ್ಯವಿದೆ, ಆದರೆ ದೇಶದ ಆರ್ಥಿಕ ಪರಿಸ್ಥಿತಿಯಿಂದ ಹೆಚ್ಚು ಹಣ ವ್ಯಯಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಇಸ್ರೇಲ್ ಬಹಳ ಚಿಕ್ಕ ದೇಶ ಆದರೆ ವಿಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಸಂಶೋಧನೆಗಳನ್ನು ಮಾಡಿದೆ. ನಾವು ಇಂತಹ ದೇಶಗಳಿಂದ ಪ್ರೇರಣೆಯನ್ನು ಪಡೆಯಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಶ್ರೀ ಅನುರಾಗ್ ಕುಮಾರ್ ಉಪಸ್ಥಿತರಿದ್ದರು.