Sunday, 8th September 2024
 
Advertise With Us | Contact Us

ಕೆಶಿಪ್: ಪ್ರಗತಿ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸಿಎಂ ಶ್ರೀ ಗೋವಿಂದ ಎಂ ಕಾರಜೋಳ ಸೂಚನೆ

ಬೆಂಗಳೂರು. ಸೆ.23: ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್) ಯಡಿ ಪ್ರಗತಿಯ ಹಂತದಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದರು.

ವಿಕಾಸಸೌಧದಲ್ಲಿಂದು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಕೆಶಿಪ್) ಕರ್ನಾಟಕ ರಾಜ್ಯ ನಿರ್ಮಾಣ ನಿಗಮ(ಕೆಎಸ್‍ಸಿಸಿ)ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಕೆಶಿಪ್ ಮೊದಲನೇ ಹಂತದಲ್ಲಿ 4615 ಕಿ.ಮೀ. ಉದ್ದದ ರಸ್ತೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು, ಅದರಲ್ಲಿ 4162 ಕಿ.ಮೀ ಉದ್ದದ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ. ಎರಡನೇ ಹಂತದಲ್ಲಿ 4522 ಕೋಟಿ ರೂ. ವೆಚ್ಚದ 1195 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ಗುರಿಹೊಂದಿದ್ದು, ಅದರಲ್ಲಿ 1163 ಕಿ.ಮೀ. ಉದ್ದದ ರಸ್ತೆಗಳನ್ನು ನಿರ್ಮಿಸಲಾಗಿದೆ. ಸೇಫ್ ಕಾರಿಡಾರ್ ಡೆಮಾನ್‍ಸ್ಟ್ರೇಷನ್ ಪ್ರೊಜೆಕ್ಟ್ ಯೋಜನೆಯಡಿ ಬೆಳಗಾವಿಯಿಂದ ಎರಗಟ್ಟಿ ಯವರೆಗೆ ನಿರ್ಮಿಸಲಾಗಿದ್ದು, ಈ ರಸ್ತೆ ಮಾರ್ಗದಲ್ಲಿ ಅಪಘಾತಗಳ ಪ್ರಮಾಣವು ಶೇ. 65 ಪ್ರಮಾಣಕ್ಕಿಂತ ಕಡಿಮೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗು ವಿಶ್ವಬ್ಯಾಂಕ್ ನಿಂದ ಪ್ರಶಸ್ತಿಯೂ ದೊರೆತಿದೆ. ಅಲ್ಲದೆ ಇದೇ ಮಾದರಿಯಲ್ಲಿ ಇತರ ರಾಜ್ಯಗಳಲ್ಲಿ ರಸ್ತೆಗಳನ್ನು ನಿರ್ಮಿಸಲು ವರದಿಯನ್ನು ಪಡೆದುಕೊಂಡು ಮುಂದಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಕೆಆರ್‍ಡಿಎಲ್ ಸಹಾಯ ಧನದಿಂದ ನಿರ್ಮಿಸುತ್ತಿರುವ ವಿವಿಧ 6 ಕಾಮಗಾರಿಗಳು ಶೇ. 94 ರಷ್ಟು ಪೂರ್ಣಗೊಂಡಿವೆ. ನೆರೆಪೀಡಿತ ಪ್ರದೇಶಗಳಲ್ಲಿ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು. ಈ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಶ್ರೀ ಗುರುಪ್ರಸಾದ್, ಕೆಶಿಪ್ ಕಾರ್ಯದರ್ಶಿ (ಪಿಡಬ್ಯೂಪಿ) ಶ್ರೀ ಕೆ.ಎಸ್. ಕೃಷ್ಣರೆಡ್ಡಿ ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಶ್ರೀ ವಿ. ಶ್ರೀನಿವಾಸ್ ಸೇರಿದಂತೆ ವಿವಿಧ ಹಿರಿಯ ಅಭಿಯಂತರರು ಹಾಜರಿದ್ದರು.

Leave a Reply

Your email address will not be published.

Dhyeya

Contact Us

Dhyeya Media Pvt. Ltd.
#50, 1st Floor, Acharya Arcade, 4th Cross,
1st Block, 3rd Phase, Banashankari 3rd Stage,
Bengaluru – 560 085