21-06-2017, ಬೆಂಗಳೂರು
ಯೋಗ ಮಾಡುವುದರಿಂದ ದೇಹ ಹಾಗೂ ಮನಸ್ಸಿಗೆ ನೆಮ್ಮದಿ ನೀಡುವುದಲ್ಲದೆ, ಆರೋಗ್ಯವು ಕೂಡ ಉತ್ತಮವಾಗಿರುತ್ತದೆ. ಪ್ರತಿಯೊಬ್ಬರು ಯೋಗವನ್ನು ಮಾಡಬೇಕು ಎಂದು ಸನ್ಮಾನ್ಯ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ಅವರು ಕಿವಿ ಮಾತು ಹೇಳಿದರು.
ಅವರು ಇಂದು ಪಿಇಎಸ್ ಕಾಲೇಜು ಆವರಣದಲ್ಲಿ ಕೇಂದ್ರ ಆಯುಷ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಯೋಗ ಅಕಾಡೆಮಿ ಹಾಗೂ ಪಿ.ಇ.ಎಸ್ ವಿಶ್ವವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಯೋಗ ದಿನವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಯೋಗ ಮಾಡುವುದರಿಂದ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟಿಕೊಳ್ಳಬಹುದು, ಮಹಾತ್ಮ ಗಾಂಧಿಜೀ ಅವರು ಹೇಳಿದಾಗೆ ಪ್ರತಿಯೊಬ್ಬರು ಒಳ್ಳೆಯದ್ದನ್ನೆ ಮಾತನಾಬೇಕು, ಕೆಟ್ಟದನ್ನು ನೋಡಬಾರದು, ಅಹಿಂಸೆಯನ್ನು ಪಾಲಿಸಿಬೇಕು ಎಂದು ಹೇಳಿದರು.
ಯೋಗವನ್ನು ಪ್ರಾಥಮಿಕ ಹಂತದ ಶೈಕ್ಷಣಿಕ ಪಠ್ಯಪುಸ್ತಕದಲ್ಲಿ ಅಳವಡಿಸುವುದರ ಬಗ್ಗೆ ಚಿಂತಿಸಿಲಾಗುವುದು, ಇದರಿಂದ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ಯೋಗದಿಂದಾಗುವ ಉಪಯೋಗಗಳ ಬಗ್ಗೆ ತಿಳಿದುಕೊಳ್ಳುತ್ತಾರೆ ಎಂದು ತಿಳಿಸಿದರು.