Thursday, 25th April 2024
 
Advertise With Us | Contact Us

ಬಸ್ ಚಾಲಕನ ಹುಚ್ಚುತನಕ್ಕೆ ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಜೂ.14, ಮೈಸೂರು: ಹುಣಸೂರು ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಚಾಲಕನೊಬ್ಬ ಬಸ್ ಅಡ್ಡಾದಿಡ್ಡಿ ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಜುನಾಥ್ ಮೃತ ದುರ್ದೈವಿ. ರವಿಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಕಪಕ್ಕ ಇದ್ದ ಬೈಕ್ ಓವರ್‌ಟೇಕ್ ಮಾಡುವ ಭರದಲ್ಲಿ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆಸಿದ ವೇಳೆ ದುರ್ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published.

Dhyeya

Contact Us

Dhyeya Media Pvt. Ltd.
#50, 1st Floor, Acharya Arcade, 4th Cross,
1st Block, 3rd Phase, Banashankari 3rd Stage,
Bengaluru – 560 085