7 years ago
ಜೂ.15, 2017, ಶ್ರೀರಂಗಪಟ್ಟಣ: ಮುಖ್ಯಮಂತ್ರಿಯಾಗಬೇಕೆಂಬ ಹಂಬಲ ನನಗಿಲ್ಲ. ಬದಲಾಗಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬ ಆಸೆಯಿದೆ. ಅದಕ್ಕಾಗಿ ಯೋಗ್ಯ ಅಭ್ಯರ್ಥಿಯನ್ನೇ ಮಂಡ್ಯದಲ್ಲಿ ನಿಲ್ಲಿಸಿ ರಾಜ್ಯದ ಜನತೆಯ ಉದ್ಧಾರಕ್ಕೆ ಪ್ರಯತ್ನಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೇಳಿದರು. ಶ್ರೀರಂಗಪಟ್ಟಣದ ಖಾಸಗಿ ಬಸ್ ನಿಲ್ದಾಣದ ವೇದಿಕೆಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪನವರು, ಬರಗಾಲ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡಲು ಹಿಂಜರಿಯುತ್ತಿರುವ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಸದ್ಯದಲ್ಲೇ ಮಾಡಲಿದ್ದೇವೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆಯೂ ಹದಗೆಟ್ಟಿದೆ. […]
7 years ago
ಜೂ.15, 2017, ಮಂಡ್ಯ: ಸ್ಲಂ ಜನರ ಸ್ಥಿತಿಗತಿ ಪರಿಶೀಲನೆಗಾಗಿಯೇ ನಾವು ಜನಸಂಪರ್ಕ ಸಭೆಯನ್ನು ಆಯೋಜಿಸಿ ಆಯಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಹೇಳಿದರು. ಮಂಡ್ಯದ ತಮಿಳು ಕಾಲೋನಿ ನೆಹರೂ ನಗರದ ಮುತ್ತುಮಾರಿಯಮ್ಮ ದೇವಸ್ಥಾನದ ಆವರಣದಲ್ಲಿ ಬಿ.ಜೆ.ಪಿ.ಯ ಸ್ಲಂ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸನ್ಮಾನ್ಯ ಶ್ರೀ...