Monday, 24th June 2024
 
Advertise With Us | Contact Us

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಅಧಿಕೃತ ಕಚೇರಿ ಆರಂಭ

ಬೆಂಗಳೂರು, 14 ಫೆಬ್ರವರಿ 2020
ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ವಿಧಾನಸೌಧದಲ್ಲಿರುವ ಕೊಠಡಿ ಸಂಖ್ಯೆ 342ರಲ್ಲಿ ತಮ್ಮ ಅಧಿಕೃತ ಕಚೇರಿಯನ್ನು ಕಾರ್ಯಾರಂಭ ಮಾಡಿದರು.

ಈ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಇಂದು ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವನಾಗಿ ಕರ್ತವ್ಯವನ್ನು ಸ್ವೀಕರಿಸಿದ್ದೇನೆ. ನನ್ನನ್ನು ಈ ಜವಾಬ್ದಾರಿಯುತ ಇಲಾಖೆಯ ಸಚಿವರನ್ನಾಗಿ ನೇಮಕ ಮಾಡಿದ ಮುಖ್ಯಮಂತ್ರಿಗಳನ್ನು ನಾನು ಅಭಿನಂದಿಸುತ್ತೇನೆ.

ಕರ್ನಾಟಕ ರಾಜ್ಯದ ಹಲವು ಜ್ವಲಂತ ನೀರಾವರಿ ಸಮಸ್ಯೆಗಳ ಪರಿಹಾರಕ್ಕಾಗಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

ಕಾವೇರಿ, ಕೃಷ್ಣ, ಮಹದಾಯಿ ಸೇರಿದಂತೆ ಎಲ್ಲಾ ನದಿನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸಿ, ರಾಜ್ಯದ ಜನತೆಗೆ ವಿಶೇಷವಾಗಿ ರೈತರಿಗೆ ಅನುಕೂಲವಾಗುವಂತೆ ನಾನು ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ.

ಒಂದೆಡೆ ನೀರಾವರಿ ಯೋಜನೆಗಳಿಗೆ ಆದ್ಯತೆ; ಮತ್ತೊಂದೆಡೆ ಸರ್ವೋಚ್ಚ ನ್ಯಾಯಾಲಯದಲ್ಲಿರುವ ನೀರು ಹಂಚಿಕೆ ಪ್ರಕರಣಗಳತ್ತ ವಿಶೇಷ ಗಮನ ಹರಿಸುತ್ತೇನೆ.

ಜನತೆಗೆ ಮತ್ತು ರಾಜ್ಯದ ಭೂಮಿಗೆ ನೀರುಣಿಸುವುದು ಮತ್ತು ರಾಜ್ಯದ ಜನರ ಕಣ್ಣೀರು ಒರೆಸುವುದು ಎರಡೂ ನನ್ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಭಾವಿಸಿದ್ದೇನೆ.

ಈ ಜಲಸಂಪನ್ಮೂಲ ಖಾತೆಯನ್ನು ವಹಿಸಿಕೊಂಡ ಕ್ಷಣದಿಂದ ರಾಜಕೀಯ ಮಾತುಗಳಿಂದ ನಾನು ದೂರವಿದ್ದು, ಕರ್ತವ್ಯದಲ್ಲಿ ಪೂರ್ಣಪ್ರಮಾಣದಲ್ಲಿ ನಾನು ತೊಡಗಿಕೊಳ್ಳುತ್ತೇನೆ.

ರಾಜ್ಯದ ಅತ್ಯಮೂಲ್ಯ ಜಲಸಂಪತ್ತನ್ನು ರಕ್ಷಿಸುವಲ್ಲಿ ಸರಕಾರದೊಂದಿಗೆ ಸಹಕರಿಸಿ ಎಂದು ಜನತೆಯಲ್ಲಿ ಮನವಿ ಮಾಡುತ್ತೇನೆ.

ಈ ಶುಭ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದರಾದ ಶ್ರೀ ಅಣ್ಣಾ ಸಾಹೇಬ್ ಜೊಲ್ಲೆ, ಚಿಕ್ಕೋಡಿ ಮಾಜಿ ಸಂಸದ ಶ್ರೀ ರಮೇಶ್ ವಿ. ಕತ್ತಿ, ಮಾಜಿ ಸಚಿವ ಶ್ರೀ ಸಿ.ಪಿ. ಯೋಗೇಶ್ವರ್, ಶಾಸಕರಾದ ಶ್ರೀ ಮಹೇಶ್ ಕುಮಟಳ್ಳಿ, ಶ್ರೀ ಎ.ಎಸ್. ಪಾಟೀಲ್ ನಡಹಳ್ಳಿ ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಜರಿದ್ದು ನೂತನ ಸಚಿವರಿಗೆ ಶುಭ ಕೋರಿದರು.

Leave a Reply

Your email address will not be published.

Dhyeya

Contact Us

Dhyeya Media Pvt. Ltd.
#50, 1st Floor, Acharya Arcade, 4th Cross,
1st Block, 3rd Phase, Banashankari 3rd Stage,
Bengaluru – 560 085